ಉಪ್ಪಾರ ಅಭಿವೃದ್ದಿ ನಿಗಮ-ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ನಮ್ಮ ದಾವಣಗೆರೆ:  2022-23ನೇ ಸಾಲಿಗೆ ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ ಈ ಕೆಳಕಂಡ ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1ರ 53(ಎ) ರಿಂದ 5(ವಿ) ವರೆಗಿನ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ದಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗಕ್ಕಾಗಿ ನೇರಸಾಲ ಯೋಜನೆ, 2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲ(ನವೀಕರಣ)(2019-20ನೇ ಸಾಲಿನ 4ನೇ ಕಂತು ಹಾಗೂ 2020-21ನೇ ಸಾಲಿನ 3 ಕಂತು) ಯೋಜನೆಯನ್ನು ಜಾರಿಗೊಳಿಸಿದ್ದು, ಯೋಜನೆಯನ್ನು ಜಾರಿಗೊಳಿಸಿದ್ದು, ಅರ್ಜಿಯನ್ನು suvidha.karnataka.gov.in ತಂತ್ರಾಂಶದ ಮೂಲಕ ಮಾತ್ರವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆ.12 ಕೊನೆಯದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ ನಿಯಮಿತ/ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಯನ್ನು ಅಥವಾ ನಿಗಮದ ವೆಬ್‍ಸೈಟ್ https://uppardevelopment.karnataka.gov.in ಅನ್ನು ಸಂಪರ್ಕಿಸಬೇಕೆಂದು ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಎನ್.ಆರ್.ಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Leave a Reply

Your email address will not be published. Required fields are marked *

error: Content is protected !!