ನಗದು ಪುರಸ್ಕಾರಕ್ಕೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ.

ನಮ್ಮ ದಾವಣಗೆರೆ ಅ. 31: 2021 ಮತ್ತು 2022ನೇ ಸಾಲಿನ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಅರ್ಹ ಕ್ರೀಡಾಪಟುಗಳಿಂದ ನಗದು ಪುರಸ್ಕಾರವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
 
ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ನ.20 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ದೂ.ಸಂ: 08192-237480 ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀಬಾಯಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!