ಪ್ರಥಮ ಮುದ್ರಣ ಪುಸ್ತಕಗಳನ್ನು ಆಯ್ಕೆಗೆ ಅರ್ಜಿ ಆಹ್ವಾನ.

ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಗ್ರಂಥಾಲಯಗಳಿಗೆ ಏಕಗವಾಕ್ಷಿ, ಯೋಜನೆಯಡಿ 2023ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಆಯ್ಕೆಗಾಗಿ ಪ್ರಥಮ ಮುದ್ರಣವಾಗಿ ಪ್ರಕಟಣೆಯಾದ ಲೇಖಕರು, ಸಾಹಿತಿಗಳು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ವರ್ಷದ ಜನವರಿ 1 ರಿಂದ ಜೂನ್ 30 ರ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂದರ್ಭಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ, ಇತರೆ ಭಾರತೀಯ ಭಾಷೆಯ ಗ್ರಂಥಗಳು ಆಯ್ಕೆಗೆ ಅರ್ಹವಾಗಿರುತ್ತವೆ.
ಜಿಲ್ಲೆಯ ಅರ್ಹ ಲೇಖಕರು, ಸಾಹಿತಿಗಳು ಹಾಗೂ ಪ್ರಕಾಶಕರು ಕಡ್ಡಾಯವಾಗಿ ಪುಸ್ತಕದ ಒಂದು ಪ್ರತಿ, ಕಾಪಿರೈಟ್ನ ನೋಂದಣಿಯ ದೃಢೀಕರಿಸಿದ ನಕಲು ಪ್ರತಿ ಹಾಗೂ ವಿತರಕರು ಸರಬರಾಜು ಹಕ್ಕನ್ನು ಪಡೆದಿದ್ದಲ್ಲಿ ಅದರ ನಕಲು ಪ್ರತಿಯನ್ನು ಅರ್ಜಿಯೊಂದಿಗೆ ಜುಲೈ 30 ರೊಳಗೆ ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ. ಬೆಂಗಳೂರು ಇಲ್ಲಿಗೆ ಕಾಫಿರೈಟ್ ಮಾಡಿಸಿ, ಜುಲೈ 31 ರಂದು ಸಂಜೆ 5 ಗಂಟೆಯೊಳಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್ ತಿಪ್ಪೇಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!