ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಶಿಶುಪಾಲನಾ ಕೇಂದ್ರ ಪ್ರಾರಂಭ

ನಗರದ ಮಹಿಳಾ ಉದ್ಯೋಗಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಶಿಶುಪಾಲನಾ ಕೇಂದ್ರವನ್ನು ಪ್ರಾರಂಭಿಸಲಾಗಿದೆ.

ಜಿಲ್ಲಾ ಪಂಚಾಯತ್ ಕಚೇರಿಯ ಸುತ್ತಮುತ್ತಲಿನ ವಿವಿಧ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ/ಅರೆಸರ್ಕಾರಿ/ಹೊರಗುತ್ತಿಗೆ ಹಾಗೂ ಖಾಸಗಿ ಸಂಸ್ಥೆಗಳ ಮಹಿಳಾ ಉದ್ಯೋಗಿಗಳು ತಮ್ಮ 6 ತಿಂಗಳಿಂದ 6 ವರ್ಷದ ಮಕ್ಕಳನ್ನು ಶಿಶುಪಾಲನ ಕೇಂದ್ರಕ್ಕೆ ದಾಖಲು ಮಾಡಬಹುದು.

ಶಿಶುಪಾಲನ ಕೇಂದ್ರವು ಬೆಳಗ್ಗೆ 9.30 ರಿಂದ ಸಂಜೆ 6.00ರ ವರೆಗೆ ಕಛೇರಿ ಕೆಲಸದ ಅವಧಿಗೆ ಅನುಗುಣವಾಗುವಂತೆ ಕಾರ್ಯನಿರ್ವಹಿಸಲಿದ್ದು, ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ಹಾಗೂ ಆರೋಗ್ಯದ ಸ್ಥಿತಿ ಸುಧಾರಿಸುವುದು, ಮಕ್ಕಳ ಉತ್ತಮ ಭವಿಷ್ಯ ರೂಪಿಸಲು, ಮಕ್ಕಳ ದೈಹಿಕ, ಸಾಮಾಜಿಕ ಹಾಗೂ ಭಾವನಾತ್ಮಕ ಬೆಳವಣಿಗೆಯನ್ನು ಉತ್ತೇಜಿಸುವುದು ಶಿಶುಪಾಲನ ಕೇಂದ್ರದ ಮುಖ್ಯ ಉದ್ದೇಶವಾಗಿರುತ್ತದೆ.

ಶಿಶುಪಾಲನಾ ಕೇಂದ್ರದಲ್ಲಿ ಮಕ್ಕಳಿಗೆ ಅಗತ್ಯವಿರುವ ತೊಟ್ಟಿಲು ಸೌಲಭ್ಯ, ಪೋಷಕಾಂಶ ಒಳಗೊಂಡ ಆಹಾರ ವಿತರಣೆ, ಮಕ್ಕಳ ಸುರಕ್ಷತೆ ಮತ್ತು ಆರೋಗ್ಯ ಸುಧಾರಣೆ, ರಕ್ಷಣೆಗಾಗಿ ಆರೋಗ್ಯ ತಪಾಸಣೆ ಮತ್ತು ಔಷಧಿಗಳ ಕಿಟ್‍ನ ಮೂಲಭೂತ ಸೌಕರ್ಯಗಳು ಲಭ್ಯವಿದ್ದು ಆಸಕ್ತರು ಇದರ ಸದುಪಯೋಗ ಪಡೆಯಬಹುದಾಗಿದೆ ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!