ಸೆ.21ರಂದು ಉದ್ಯೋಗ ಮೇಳ

ನಮ್ಮ ದಾವಣಗೆರೆ ಸೆ. 19: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಸೆಪ್ಟೆಂಬರ್ 21ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದÀಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ.ಸಂ.51)ದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಹಲವು ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ನೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ. 6361550016, 08192-259446 ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ. ಡಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!