ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಸಾಲ ಯೋಜನೆ

ದಾವಣಗೆರೆ ಜೂ. 28: ಜಿಲ್ಲೆಯ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದೇಶಿ ಸಾಲ ಯೋಜನೆಯಡಿ ವಿದ್ಯಾಭ್ಯಾಸಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
 
ವಿದೇಶದಲ್ಲಿ ವ್ಯಾಸಾಂಗ ಮಾಡಲು ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಮತ್ತು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ, ಭಾರತ ದೇಶದ ಪ್ರತಿಷ್ಠಿತ IIಖಿ`S, IIಒ`S, ISಅ ಸಂಸ್ಥೆಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅರ್ಹರಾಗಿದ್ದು, ನಿಗಮದ ವೆಬ್ಸೈಟ್ https://kmdc.karnataka.gov.in/ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ (ನಿ), ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್. ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 081 92-232349 ,8577944214 ಸಂಪರ್ಕಿಸಲು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!