ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ನಮ್ಮ ದಾವಣಗೆರೆ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ (ನವೀಕರಣ)ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1ರ 6(ಎ) ರಿಂದ 6(ಎಕೆ) ವರೆಗಿದ ಬೆಸ್ತ, ಕೋಳಿ, ಕಬ್ಬಲಿಗ ಇತ್ಯಾದಿ ಜಾತಿ/ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಆರ್ತಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಜುಲೈ.14 ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ಸುವಿಧಾ ತಂತ್ರಾಂಶದ Suvida.karnataka.gov. ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಜಶರಣ ಅಂಬಿಗರ ಚೌಡಯ್ಯ, ಅಭಿವೃದ್ಧಿ ನಿಗಮ ನಿಯಮಿತ/ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯನ್ನು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ವೆಬ್‍ಸೈಟ್ https://ambigaradevelopment.karnataka.gov.in ಅನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಡಿ.ಬಿ.ಸಿ.ಡಿ.ಸಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!