ಏಪ್ರಿಲ್‌ 28ಕ್ಕೆ ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ

ನಮ್ಮ ದಾವಣಗೆರೆ ಏ. 25: ಏಪ್ರಿಲ್ 28ಕ್ಕೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ರವರ ಚುನಾವಣಾ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ದಾವಣಗೆರೆಗೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಏಪ್ರಿಲ್‌ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಾವಣಗೆರೆ ಕ್ಷೇತ್ರದಲ್ಲಿ ಮೇ7 ರಂದು ಚುನವಾಣೆ ನಡೆಯಲಿದೆ.

ನಗರದ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದ ಆವರಣದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಮೋದಿ ಅವರು 1 ಗಂಟೆಗೆ ದಾವಣಗೆರೆಗೆ ಆಗಮಿಸಲಿದ್ದಾರೆ. ಮೋದಿಯವರ ಸಮಾವೇಶ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿ ಇಂದು ಏಪ್ರಿಲ್‌ 24 ರಂದು ಬಿಜೆಪಿ ಪ್ರಚಾರ ಸಮಾವೇಶದ ಹಂದರ ಕಂಬದ ಪೂಜೆ ನೆರವೇರಿಸಲಾಯಿತು.

ನಮ್ಮ ದಾವಣಗೆರೆ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ: 

ನಮ್ಮ ದಾವಣಗೆರೆ ವಾಟ್ಸಪ್ಪ್ ಗ್ರೂಪ್ 05

ಪೂಜೆ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಸಂಸದ ಡಾ. ಜಿ.ಎಂ.ಸಿದ್ದೇಶ್ವರ ರವರು, ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಹಾಗೂ ಹಾವೇರಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಯವರ ಪರ ಮತಯಾಚನೆ ಮಾಡಲಿದ್ದಾರೆ ಹಾಗೂ ಈ ಬಾರಿಯ ಚುನಾವಣೆಯಲ್ಲಿ ಜನರು ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ಸಂಸತ್ತಿಗೆ ಆಯ್ಕೆ ಮಾಡಿ ಕಳುಹಿಸಲಿದ್ದಾರೆ ಎಂದರು. ಮಧ್ಯಾಹ್ನ 1 ಗಂಟೆಯಿಂದ ಮೋದಿಯವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವರು. ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ನಾಯಕರು ಆಗಮಿಸಲಿದ್ದು, ಅಪಾರ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ ಎಂದು ಹೇಳಿದರು.

 

 

 

 

 

Leave a Reply

Your email address will not be published. Required fields are marked *

error: Content is protected !!