ಪ್ರಧಾನಿ ನರೇಂದ್ರ ಮೋದಿ ಯವರ ತಾಯಿ ಹೀರಾಬೆನ್ ಮೋದಿ ವಿಧಿವಶ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ಹೀರಾಬೆನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಅಹಮದಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಧಾನಿ ಮೋದಿ ಕೂಡ ತಮ್ಮ ತಾಯಿಯನ್ನು ಭೇಟಿ ಮಾಡಲು ಅಹಮದಾಬಾದ್‌ನ ಆಸ್ಪತ್ರೆಗೆ ತೆರಳಿದ್ದರು.

ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ಆಶೀರ್ವಾದ ಪಡೆದಿದ್ದರು. ತಾಯಿಯ ಪಾದ ತೊಳೆದು ಪೂಜಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಯವರ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!