ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮದಡಿ ರಂಗೋಲಿ ಸ್ಪರ್ಧೆ.

ನಮ್ಮ ದಾವಣಗೆರೆ ಜ. 13: ಪ್ರಸಕ್ತ ಸಾಲಿನಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ, ಕಾರ್ಯಕ್ರಮದಡಿಯಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣ ಪ್ರೋತ್ಸಾಹಿಸುವ ವಿಷಯದ ಕುರಿತು ಅರಿವು ಮೂಡಿಸಲು ಫೆ.3 ರಂದು ಮಧ್ಯಾಹ್ನ 2. ಗಂಟೆಗೆ ನಗರದ ಗಾಜಿನ ಮನೆಯಲ್ಲಿ ರಂಗೋಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ ಮಹಿಳೆಯರು ಸ್ಪರ್ಧೆಯಲ್ಲಿ ಭಾಗವಹಿಸಿ ಮೇಲಿನ ವಿಷಯಕ್ಕನುಸಾರವಾಗಿ ಸೂಕ್ತ ತಲೆಬರಹ, ಸ್ಲೋಗನ್‌ನೊಂದಿಗೆ ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯರಸ್ತೆ, ಕುವೆಂಪುನಗರ, ಎಂ.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಕಚೇರಿಯಲ್ಲಿ ಜ.31 ರೊಳಗಾಗಿ ನೊಂದಾಯಿಸಿಕೊಳ್ಳಲು ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!