ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ವಿವಿಧ ಕೌಶಲ್ಯಗಳ ತರಬೇತಿ ಶಿಬಿರ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ 4 ತಿಂಗಳ ಕೌಶಲ್ಯ ತರಬೇತಿಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿದ ಅಲ್ಪಸಂಖ್ಯಾತರ ಸಮುದಾಯದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
 
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 35 ವರ್ಷ ವಯೋಮಾನದವರಾಗಿರಬೇಕು. ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಸ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ವಾರ್ಷಿಕ ಆದಾಯ ರೂ.8. ಲಕ್ಷ ಮೀರಿರಬಾರದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಶಿಷ್ಯವೇತನದ ಮೂಲಕ ಊಟ ವಸತಿ ಸೌಲಭ್ಯವಿರುತ್ತದೆ.
ಅರ್ಜಿ ಸಲ್ಲಿಸಲು ಸೆ.16 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು ಅಗತ್ಯ ದಾಖಲೆಗಳೊಂದಿಗೆ ವೆಬ್ಸೈಟ್ www.dom.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!